ಹಾಸನ: ಹಾಸನದ ಹೊಸ ಬಸ್ ನಿಲ್ದಾಣದ ಬಳಿ ಕೆಎಸ್ಆರ್ಟಿಸಿ ರಾಜಹಂಸ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಎಂಜಿನಿಯರಿಂಗ್ ವಿದ್ಯಾಥರ್ಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ.
car
ಹಾಸನದ ಮಲ್ನಾಡ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಉಡುಪಿಯ ವರುಣ್(21), ಹಾಸನದ ಲಿಖಿತ್ಗೌಡ(21), ಚಿಕ್ಕಮಗಳೂರಿನ ಆದರ್ಶ(21), ಮತ್ತು ಅಮೋಘ್(21) ಎಂಬುವರು ಮೃತಪಟ್ಟಿದ್ದು, ಮೈಸೂರಿನ ಗರುಡಾ(22) ಎಂಬಾತ ತೀವ್ರವಾಗಿ ಗಾಯಗೊಂಡಿದ್ದಾನೆ. ಈ ಐದೂ ಮಂದಿ ನಿನ್ನೆ ಬುಲೇರೋ ಕಾರಿನಲ್ಲಿ ಹೊರಗೆ ಹೋಗಿದ್ದರು. ಬೆಳಗಿನ ಜಾವ 1.30ರ ಸುಮಾರಿನಲ್ಲಿ ಕಾರಿನಲ್ಲಿ ಹಾಸನದ ಹೊಸ ಬಸ್ ನಿಲ್ದಾಣದ ಬಳಿ ಬರುತ್ತಿದ್ದಾಗ ಹಾಸನದಿಂದ ಮಂಗಳೂರಿಗೆ ತೆರಳುತ್ತಿದ್ದ ರಾಜಹಂಸ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಬುಲೇರೋ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸುತ್ತಿದ್ದಂತೆ ಬಸ್ ನಿಲ್ದಾಣದ ಬಳಿಯಿದ್ದ ಜನರು ಘಟನಾ ಸ್ಥಳಕ್ಕೆ ಬಂದಿದ್ದು, ಕೂಡಲೇ ನಗರ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಕಾರಿನಲ್ಲಿ ಸಿಲುಕಿ ಮೃತಪಟ್ಟಿದ್ದ ವಿದ್ಯಾಥರ್ಿಗಳನ್ನು ಹೊರ ತೆಗೆಯಲು ಹರಸಾಹಸಪಟ್ಟರು. ಹಿಂಬದಿ ಸೀಟಿನಲ್ಲಿ ಕೂತಿದ್ದ ಗರುಡ ಮಾತ್ರ ತೀವ್ರ ಗಾಯಗಳೊಂದಿಗೆ ನರಳುತ್ತಿದ್ದು, ಆತನನ್ನು ಕೂಡಲೇ ಹೊರ ತೆಗೆದ ಪೊಲೀಸರು ಸಕರ್ಾರಿ ಆಸ್ಪತ್ರೆಗೆ ದಾಖಲಿಸಿದರು

By suddi9

Leave a Reply

Your email address will not be published. Required fields are marked *