ಪೊಳಲಿ: ಬಂಟ್ವಾಳ ತಾಲೂಕಿನ ಪೊಳಲಿ ರಾಮಕೃಷ್ಣ ತಪೋವನವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ ನೀಡಲಾಗುವ ೨೦೨೦-೨೧ ನೇ ಸಾಲಿನ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.
ರಾಜ್ಯದಲ್ಲಿ ನಾಲ್ಕು ಸಂಸ್ಥೆಗಳು ಆಯ್ಕೆಯಾಗಿದೆ. ಮಾ. ೧೦ ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ನೀಡುವ ಪ್ರಶಸ್ತಿಯನ್ನು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ರಾಮಕೃಷ್ಣ ತಪೋವನದಲ್ಲಿ ೨೦೦೨ ರಿಂದ ವಿಶೇಷವಾಗಿ ಮಕ್ಕಳಿಗೆ ಹಾಸ್ಟೇಲ್,ಮಾರ್ಷಲ್ ಆಟ್ಟ್÷್ಸ ತರಗತಿ , ಕಂಪ್ಯೂಟರ್ ಕ್ಲಾಸ್,ಹೊಲಿಗೆ ತರಬೇತಿ,ಮುಂತಾದ ಹಲವು ಕಾರ್ಯಕ್ರಮಗಳನ್ನು ಮಾಡಿ ಯಶಸ್ವಿಯಾಗಿ ನಿರ್ವಹಿಸಿದ ಸಂಸ್ಥೆಯು ಇದಾಗಿದೆ.