ಬಂಟ್ವಾಳ:ಇಲ್ಲಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಜನಾ ಮಂಡಳಿ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಅಹೋರಾತ್ರಿ ಭಜನಾ ಮಂಗಲೋತ್ಸವ ಸಹಿತ ಏಕದಶ ರುದ್ರಾಭಿಷೇಕ ಮತ್ತು ೨೫ ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಗುರುವಾರ ನಡೆಯಿತು.11btl-Nandavara

ದೇವಳದ ಪ್ರಧಾನ ಅರ್ಚಕ ರಾಮಚಂದ್ರ ಭಟ್ ದೈಲ ಮತ್ತು ಅರಳ ಶ್ರೀ ಗರುಡ ಮಹಾಕಾಳಿ ದೇವಳದ ಪ್ರಧಾನ ಅರ್ಚಕ ಹರೀಶ್ ಭಟ್ ಭಜನಾ ಮಂಗಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಭಟ್ ದೈಲ, ಗೌರವಾಧ್ಯಕ್ಷ ಹೇಮಚಂದ್ರ ಶೆಟ್ಟಿಗಾರ್, ಸಂಚಾಲಕ ಸದಾನಂದ ಗೌಡ ಮತ್ತಾವು ಮತ್ತಿತರರು ಇದ್ದರು. ವಿವಿಧ ಕಡೆಯಿಂದ ಸುಮಾರು ೨೫ ತಂಡಗಳು ಭಜನೆ ಸೇವೆಯಲ್ಲಿ ಪಾಲ್ಗೊಂಡರು.

By suddi9

Leave a Reply

Your email address will not be published. Required fields are marked *