ಬಂಟ್ವಾಳ:ತಾಲ್ಲೂಕಿನ ನಾವೂರು ಸಕರ್ಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಾಜಪೇಯಿ ಆರೋಗ್ಯಶ್ರೀ 0ೋಜನೆ0ುಡಿ ‘ಉಚಿತ ಆರೋಗ್ಯ ತಪಾಸಣೆ ಶಿಬಿರ’ ವು ಬುಧವಾರ ನಡೆಯಿತು.
ಬಂಟ್ವಾಳ ತಾಲ್ಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ ಇವರು ಶಿಬಿರ ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವೂ ಆಗಿದೆ ಎಂದು ಅವರು ಹೇಳಿದರು.
ನಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬೇಬಿ ಸುವರ್ಣ, ಆರೋಗ್ಯಶ್ರೀ 0ೋಜನೆ ಜಿಲ್ಲಾ ವ್ಯವಸ್ಥಾಪಕ ಜಗನ್ನಾಥ ಶಿಲರ್ಾಲ್, ನಾವೂರು ವೈದ್ಯಾಧಿಕಾರಿ ಡಾ.ಜೀವನ್ ಶೆಟ್ಟಿ, ಬಂಟ್ವಾಳ ತಾ.ಪಂ.ಉಪಾಧ್ಯಕ್ಷೆ ವಿಲಾಸಿನಿ ಪೂಜಾರಿ ಮತ್ತಿತರರು ಶುಭ ಹಾರೈಸಿದರು. ಆರೋಗ್ಯಮಿತ್ರರಾದ ಉಷಾ ಸ್ವಾಗತಿಸಿ, ಕವಿತಾ ವಂದಿಸಿದರು.