ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ರಾಘವೇಂದ್ರ, ಪುತ್ರಿ ಅರುಣಾ ದೇವಿ ಮತ್ತು ಈಶ್ವರಪ್ಪ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಕೆಳ ಶಿವಮೊಗ್ಗದ ಸೆಷನ್ಸ್ ಕೋರ್ಟ್ ನಲ್ಲಿ ದೂರು ದಾಖಲಾಗಿತ್ತು. ಆದರೆ ಪೂರ್ವಾನುಮತಿ ಇಲ್ಲದ ಕಾರಣ ಕೆಳ ನ್ಯಾಯಾಲಯ ಪ್ರಕರಣವನ್ನು ವಜಾಗೊಳಿಸಿತ್ತು.

ದೂರುದಾರ ವಕೀಲ ಬಿ.ವಿನೋದ್ ಅವರು ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠ, ಕೆಳ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ ಮತ್ತು ಹೊಸದಾಗಿ ಅರ್ಜಿ ಪರಿಗಣಿಸುವಂತೆ ಸೂಚಿಸಿದೆ. ದೂರದಾರ ವಿನೋದ್ ಅವರಿಗೆ ಹೈಕೋರ್ಟ್ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅವರು ಅರ್ಜಿ ಸಲ್ಲಿಸಿದರೆ ಯಡಿಯೂರಪ್ಪ ಕುಟುಂಬ ಹಾಗೂ ಈಶ್ವರಪ್ಪ ಅವರ ವಿರುದ್ಧ ಪುನಾ ತನಿಖೆ ಆರಂಭವಾಗಲಿದೆ.

By suddi9

Leave a Reply

Your email address will not be published. Required fields are marked *