ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಖಾಸಗಿ ಕಟ್ಟಡವೊಂದರ ಬಳಿ ನಿಲ್ಲಿಸಲಾಗಿದ್ದ ಸ್ಕೂಟರನ್ನು ಕಳ್ಳರು ಎಗರಿಸಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ.
ಬಿ.ಸಿ.ರೋಡಿನಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ವೇಣುಗೋಪಾಲ್ ಎಂಬವರು ಕಳೆದ ಶುಕ್ರವಾರ ನಿಲ್ಲಿಸಿದ್ದ ಸ್ಕೂಟರಿಗೆ ನಕಲಿ ಕೀ ಬಳಸಿ ಕಳವು ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಠಾಣೆಗೆ ಸೋಮವಾರ ದೂರು ಬಂದಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.