ಬಂಟ್ವಾಳ:  ಬಂಟ್ವಾಳ ತಾಲೂಕು ಅರಳ ಗ್ರಾಮದ ಹಿರ್ಣಿ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಬೆಳ್ಳಿ ಹಬ್ಬ ಆಚರಣಾ ಸಮಿತಿ ಆಶ್ರಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಯಕ್ಷಗಾನ ಬಯಲಾಟ ಮತ್ತು ಕಲಾವಿದರಿಗೆ ಸಮ್ಮಾನ ಕಾರ್ಯಕ್ರಮ ಎ.೩ರಂದು ಹಿರ್ಣಿಯಲ್ಲಿ  ನಡೆಯಲಿದೆ. ಬೆಳಗ್ಗೆ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದ ಅರ್ಚಕ ಹರೀಶ್ ಭಟ್ ಅವರ ನೇತೃತ್ವದಲ್ಲಿ ಗಣ ಹೋಮ, ದುರ್ಗಾಹೋಮ, ಅಶ್ಲೇಷ ಬಲಿ ಪೂಜೆ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಟೀಲು ದೇಗುಲದ ಆನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ ಅವರು ಆಶೀರ್ವಚನ ನೀಡಲಿರುವರು.

ಅರಳ ಗ್ರಾ.ಪಂ.ಮಾಜಿ ಅಧ್ಯಕ್ಷ ಜಗದೀಶ ಆಳ್ವ ಅಗ್ಗೊಂಡೆ ಅಧ್ಯಕ್ಷತೆ ವಹಿಸುವರು. ನಿವೃತ್ತ ಶಿಕ್ಷಕ ಸೋಮಪ್ಪ ಮಡಿವಾಳ, ಹಿಂದೂ ಧರ್ಮೋತ್ಥಾನ ವೇದಿಕೆ ರಾಯಿ ಕೊಲ ಅರಳ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು ಅತಿಥಿಗಳಾಗಿ ಭಾಗವಹಿಸುವರು. ಕಟೀಲು ಮೇಳದ ಕಲಾವಿದರಾದ ಗಣೇಶ್ ರೈ ಅರಳ ಹಾಗೂ ಪ್ರೇಮ್‌ರಾಜ್ ಕೊಲ ಅವರನ್ನು ಸಮ್ಮಾನಿಸಲಿದ್ದು, ಯಕ್ಷಗಾನ ಹಿಮ್ಮೇಳ ವಾದಕ ಚಂದ್ರಶೇಖರ ಭಟ್ ಕೊಂಕಣಾಜೆ ಅಭಿನಂದನಾ ಭಾಷಣ ಮಾಡುವರು. ಅನ್ನ ಸಂತರ್ಪಣೆ ಬಳಿಕ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *