ಶ್ರೀನಿವಾಸಪುರ : ಗ್ರಾಮೀಣ ಪ್ರದೇಶದ ನಾಗರಿಕರು ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರಗಳ ಪ್ರಯೋಜನ ಪಡೆದುಕೊಳ್ಳಬೇಕು . ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು .
ತಾಲೂಕಿನ ಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಮಾರಂಭಲ್ಲಿ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು , ಈ ಕೇಂದ್ರಗಳು ಜನರ ಪ್ರಾಥಮಿ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿವೆ . ಇಲ್ಲಿನ ಆರೋಗ್ಯ , ಸಿಬ್ಬಂದಿ ಗ್ರಾಮದ ಆರೋಗ್ಯ ರಕ್ಷಣೆಯ ಹೊಣೆ ಹೊತ್ತಿರುತ್ತದೆ ಎಂದು ಹೇಳಿದರು . ತಾಲ್ಲೂಕು ಆರೋಗ್ಯಾಧಿಕಾರಿ ಡಾ . ಎಂ.ಸಿ.ವಿಜಯ , ಸಮಾಜ ಕಲ್ಯಾಣಾಧಿಕಾರಿ ರಾಮೇಗೌಡ , ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ , ಗೋಪಾಲರೆಡ್ಡಿ , ಆನಂದ್ , ಮುನೇಗೌಡ , ನಾರಾಯಣಗೌಡ , ಪ್ರಭಾಕರಗೌಡ , ಸುರೇಶ್ ಬಾಬು ಇದ್ದರು .