ಬಂಟ್ವಾಳ: ಮಿನಿ ವಿಧಾನಸೌಧದ ತಹಶೀಲ್ದಾರ್ ಕಚೇರಿಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿಗೆ ವರ್ಗಾವಣೆಗೊಂಡ ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಕಂದಾಯ ಇಲಾಖೆಯಿಂದ ನಡೆದ ಬಿಳ್ಕೋಡುಗೆ ಸಮಾರಂಭದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್‌.ಆರ್ ಪುಷ್ಪರಾಜ್ ಪೂಜಾರಿಯವರು ಕಂದಾಯ ಮತ್ತು ಸರ್ವೆ ಇಲಾಖೆಗಳ ಮಧ್ಯೆ ಯಾವುದೇ ವ್ಯತ್ಯಾಸ ಇಲ್ಲದಂತೆ ಪರಸ್ಪರ ಸಹಕಾರದಿಂದ ಕರ್ತವ್ಯ ನಿರ್ವಹಿಸಲು ಕಾರಣಕರ್ತರಾಗಿದ್ದರು.

0550da92-ccb5-4c2f-956a-50806225c8df
ಇದರಿಂದ ಎಲ್ಲಾ ಕಾರ್ಯಗಳು ಸುಲಲಿತವಾಗಿ ನಡೆಯಲು ಸಾಧ್ಯವಾಗಿತ್ತು ಎಂದರು. ಬಳಿಕ ಕಚೇರಿ ಸಿಬ್ಬಂದಿಯವರ ಪರವಾಗಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಮಾತನಾಡಿ ಕಡು ಬಡವರಿಂದ ಹಿಡಿದು ಎಲ್ಲಾ ಸಹೋದ್ಯೋಗಿಗಳು ಮತ್ತು ಮೇಲಾಧಿಕಾರಿಗಳ ಜೊತೆ ಅತ್ಯಂತ ಆತ್ಮೀಯತೆಯಿಂದ ವ್ಯವಹರಿಸುವ ಅಪರೂಪದ ಅಧಿಕಾರಿ ಎಂದು ಇದೇ ಸಂದರ್ಭದಲ್ಲಿ ಹೇಳಿದರು.ಬಳಿಕ ಪುಷ್ಪರಾಜ್ ಅವರಿಗೆ ಶಾಲು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದಅವರು ಬಂಟ್ವಾಳ ತಾಲೂಕಿನಲ್ಲಿ ಕಂದಾಯ ಇಲಾಖೆಯಿಂದ ದೊರೆತ ಸಹಾಕರ ಮರೆಯಲು ಸಾಧ್ಯವಿಲ್ಲ.ಪ್ರತಿಯೊಬ್ಬರು ಸಮನ್ವತೆಯಿಂದ ಕರ್ತವ್ಯ ನಿರ್ವಹಿಸಿದರೆ ಮಾತ್ರ ಯಶಸ್ಸು ಸಾಧಿಸಬಹುದು ಎಂದು ಹೇಳಿ ‌ಎಲ್ಲಾ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತುಂಬು ಹೃದಯದ ಕೃತಜ್ಞತೆ ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ದೀಪಾ ಪ್ರಭು, ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ. ನವೀನ್ ಬೆಂಜನಪದವು‌ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರುಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.

By suddi9

Leave a Reply

Your email address will not be published. Required fields are marked *