ಕೈಕಂಬ: ಕುಪ್ಪೆಪದವು ಶ್ರೀ ದುರ್ಗೇಶ್ವರಿ ದೇವಿ ದೇವಸ್ಥಾನದ ಜೀರ್ಣೋಧಾರ ಕುರಿತು ಸಮಾಲೋಚನಾ ಸಭೆಯು ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು.
ದೇವಸ್ಥಾನದ ಆಡಳಿತ ಟ್ರಸ್ಟಿ ಪ್ರವೀಣ್ ಕುಮಾರ್ ಜೈನ್ ಅಗರಿ , ಜೀರ್ಣೋಧಾರ ಸಮಿತಿಯ ಅಧ್ಯಕ್ಷ ಅಜಿತ್ ಕುಮಾರ್ ಜೈನ್, ಉಪಾಧ್ಯಕ್ಷ ರಾಮಚಂದ್ರ ಸಾಲಿಯಾನ್, ಟ್ರಸ್ಟಿಗಳಾದ ರಾಮಣ್ಣ ನಾಯ್ಕ್ ಕಿಲೆಂಜಾರು, ಅಜಯ್ ಅಮೀನ್ ನಾಗಂದಡಿ, ಅರ್ಚಕ ಸದಾಶಿವ ರಂತ್, ದುರ್ಗೇಶ್ವರಿ ಸೇವಾ ಸಮಿತಿಯ ಅಧ್ಯಕ್ಷ ಜಗದೀಶ್ ಕುಲಾಲ್ ಪಾಕಜೆ, ಸಮಿತಿಯ ಸದಸ್ಯರುಗಳು, ಮುಖಂಡರುಗಳು ಹಾಗೂ ಭಕ್ತರು ಸಭೆಯಲ್ಲಿ ಭಾಗವಹಿಸಿದ್ದರು. ಅಂದಾಜು ಒಂದು ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ನಡೆಯಲಿದ್ದು, ಈಗಾಗಲೇ ಕೆಲಸ ಪ್ರಾರಂಭವಾಗಿದೆ.