ಬಂಟ್ವಾಳ:ಇಲ್ಲಿನ ಟೈಲರ್ಸ್ ಅಸೋಸಿಯೇಷನ್ ಇದರ ನೂತನ ಅಧ್ಯಕ್ಷರಾಗಿ ನಾಗೇಶ್ ಎಂ. ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಈಶ್ವರ್ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಭಾನುವಾರ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.
ಕಾರ್ಯದರ್ಶಿಯಾಗಿ ಯಾದೇಶ್ ತುಂಬೆ, ಕೋಶಾಧಿಕಾರಿಯಾಗಿ ತುಳಸಿ ಆರ್. ಆಯ್ಕೆಯಾದರು. ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲಿಯಾನ್, ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ನಾಗೇಶ್ ಎಂ. ವರದಿ ವಾಚಿಸಿದರು. ಕೋಶಾಧಿಕಾರಿ ಯಾದೇಶ್ ತುಂಬೆ ಲೆಕ್ಕ ಪತ್ರ ಮಂಡಿಸಿದರು. ವಸಂತ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.