ಬಂಟ್ವಾಳ: ಬಂಟ್ವಾಳ-ಮೂಡಬಿದಿರೆ ರಸ್ತೆ ನಡುವಿನ ಸಿದ್ಧಕಟ್ಟೆ ಸಮೀಪದ ಮಾಡಮೆ ಎಂಬಲ್ಲಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೊಟ್ಟೆ ಸಾಗಿಸುತ್ತಿದ್ದ ಗೂಡ್ಸ್ ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

ಗಾಯಾಳುಗಳನ್ನು ಪಿಕಪ್ ವಾಹನ ಚಾಲಕ ಬಂಟ್ವಾಳ ಕೆಳಗಿನಪೇಟೆ ನಿವಾಸಿ ಅಬ್ದುಲ್ ರಹಿಮಾನ್, ಪ್ರಯಾಣಿಕರಾದ ಬಿ.ಸಿ.ರೋಡ್ನ ಶಾಂತಿಅಂಗಡಿ ನಿವಾಸಿ ನೌಶಿನ್ ಮತ್ತು ಕಲ್ಲಡ್ಕ ನಿವಾಸಿ ಶರೀಫ್ ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿದ್ಧಕಟ್ಟೆ ಸಮೀಪದ ಮಾಡಮೆ ತಿರುವಿನಲ್ಲಿ ಬಂಟ್ವಾಳದಿಂದ ಮೂಡುಬಿದ್ರೆಗೆ ಹೋಗುತ್ತಿದ್ದ ಲಾರಿ ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, ಪಿಕಪ್ ವಾಹನದಲ್ಲಿದ್ದ ಅಪಾರ ಮೌಲ್ಯದ ಮೊಟ್ಟೆ ಒಡೆದು ಹೋಗಿ ನಷ್ಟ ಉಮಟಾಗಿದೆ ಎಂದು ಪುಂಜಾಲಕಟ್ಟೆ ಪೊಲೀಸರು ತಿಳಿಸಿದ್ದಾರೆ.