ಮುಂಬಯಿ : ಕನ್ನಡ ವಿಭಾಗದ ಸಂಶೋಧನ ವಿದ್ಯಾರ್ಥಿ ದುರ್ಗಪ್ಪ ಯ.ಕೋಟಿಯವರ್ ಅವರು ಬರೆದು ಸಲ್ಲಿಸಿದ ಪಿಎಚ್.ಡಿ ಮಹಾಪ್ರಬಂಧ ‘ಮುಂಬಯಿ ಕನ್ನಡ ಗದ್ಯ ಸಾಹಿತ್ಯ’ ಎಂಬ ವಿಷಯಕ್ಕೆ ಮುಂಬಯಿ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.Durgappa U.Kotiyawar (A)

ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ.ಎನ್ ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ದುರ್ಗಪ್ಪ ಅವರು ಮಹಾಪ್ರಬಂಧ ಸಿದ್ಧಪಡಿಸಿ ಮುಂಬಯಿ ವಿಶ್ವವಿದ್ಯಾಲಯಕ್ಕೆ ಪಿಎಚ್.ಡಿ ಪದವಿಗಾಗಿ ಸಾದರ ಪಡೆಸಿದ್ದರು.

ಸಾಹಿತ್ಯ ವಲಯವಾಗಿ ಮುಂಬಯಿ ನಾಡಿನ ಗಮನಸೆಳೆದಿದ್ದು ಕಳೆದ ೧೫೦ ವರ್ಷಗಳಲ್ಲಿ ರಚನೆಯಾಗದ ಗದ್ಯ ಕೃತಿಗಳ ಮೇಲೆ ಬೆಳಕು ಚೆಲ್ಲಿರುವುದು ಈ ಮಹಾಪ್ರಬಂಧದ ವೈಶಿಷ್ಟ್ಯವೆಂದು ಮಾರ್ಗದರ್ಶಕರು ಸಂತಸ ವ್ಯಕ್ತಪಡಿಸಿದ್ದಾರೆ.

ದುರ್ಗಪ್ಪ ಕೋಟಿಯವರ್:
ಕರ್ನಾಟಕ ರಾಜ್ಯದ ಸೊಲ್ಲಾಪುರ ಜಿಲ್ಲೆಯವರು. ಸೊಲ್ಲಾಪುರ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಇವರು ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಪ್ರಾಧ್ಯಾಪಕ, ಮುಖ್ಯಸ್ಥ ಡಾ| ಜಿ.ಎನ್ ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ಎಂ.ಫಿಲ್ ಪದವಿ ಪಡೆದು, ಆ ಸಂಪ್ರಬಂಧವನ್ನು ಅಭಿಜಿತ ಪ್ರಕಾಶನ ಮೂಲಕ ಪ್ರಕಟಿಸಿದ್ದಾರೆ. ದುರ್ಗಪ್ಪ ಅವರು ಒಳಹೊರನಾಡಿನ ಪತ್ರಿಕೆಗಳಿಗೆ ಅನೇಕ ಲೇಖನಗಳನ್ನು ಬರೆದು ಪ್ರಕಟಿಸುತ್ತಾ ಬಂದಿರುತ್ತಾರೆ. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಯ ಸದಸ್ಯರೂ ಆಗಿದ್ದು ಮುಂಬಯಿಯ ವಿವಿಧ ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಕನ್ನಡದ ಕೈಂಕರ್ಯಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸದ್ಯ ಅವರು ಮುಂಬಯಿ ಮಹಾನಗರಪಾಲಿಕೆ ಇದರ ಶಿವ್ಡಿ ಮುನ್ಸಿಪಲ್ ಕನ್ನಡ ಶಾಲೆಯಲ್ಲಿ ಕನ್ನಡ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *