ಬಂಟ್ವಾಳ: ಅವಿಭಜಿತ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಸಂಬಂಧಸಿದಂತೆ ವಿಧಾನಪರಿಷತ್ತಿನ ಎರಡು ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಗೆ ಬಂಟ್ವಾಳ ತಾಲ್ಲೂಕಿನಲ್ಲಿ ಶೇ ೧೦೦ ಮತದಾನವಾಗಿದೆ.

ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಇವರು ಪುರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಪುರಸಭೆ ಸೇರಿದಂತೆ ತಾಲ್ಲೂಕಿನ ಒಟ್ಟು ೫೯ ಮತಗಟ್ಟೆಯಲ್ಲಿ ಒಟ್ಟು ೯೦೩ ಮತದಾರರ ಪೈಕಿ ಎಲ್ಲರೂ ಮತ ಚಲಾಯಿಸಿದ್ದಾರೆ. ಒಟ್ಟು ೪೩೭ ಮಂದಿ ಪುರುಷರು ಮತ್ತು ೪೬೬ ಮಂದಿ ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ. ಪ್ರತೀ ಮತಗಟ್ಟೆಯಲ್ಲಿ ಮತಗಟ್ಟೆ ಅಧಿಕಾರಿ ಸಹಿತ ಸಹಾಯಕ ಮತ್ತು ಪೊಲೀಸ್ ಸಿಬ್ಬಂದಿ ಇದ್ದರು.

By suddi9

Leave a Reply

Your email address will not be published. Required fields are marked *