ಬಂಟ್ವಾಳ: ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ವೀಣಾ ಭಟ್ ಉಂಡೆಮನೆ ಅವರು ಆಯ್ಕೆಯಾಗಿದ್ದಾರೆ.Veena bhat

ಶಿಕ್ಷಣ, ಸಂಘಟನೆ, ಸಾಹಿತ್ಯ, ಸಮಾಜ ಸೇವೆ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಇವರ ಸೇವಾ ತತ್ಪರತೆಯನ್ನು ಗುರುತಿಸಿ ಅಖಿಲಕರ್ನಾಟಕ ಸಾಂಸ್ಕೃತಿಕ ಪರಿಷತ್ತು ರಾಜ್ಯ ಸಮಿತಿಯು ಇವರನ್ನು ದಕ್ಷಿಣಕನ್ನಡ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಾಗಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮನೋಹರ ನಾಯಕ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

By suddi9

Leave a Reply

Your email address will not be published. Required fields are marked *