ಬಂಟ್ವಾಳ : ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಕ್ಕಿಪಾಡಿ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಬೂತ್ ಸಮಿತಿ ಅಧ್ಯಕ್ಷರುಗಳಾದ ಸುಧೀಂದ್ರ ಶೆಟ್ಟಿ, ಸುಧಾಕರ ಶೆಟ್ಟಿ ಅಟ್ಲಬೆಟ್ಟು ಇವರ ನಿವಾಸದಲ್ಲಿ ತೆಂಗಿನ ಸಸಿಯನ್ನು ನೆಡುವ ಮುಖಾಂತರ ನಮ್ಮ “ನಡೆ ಬೂತ್ ಕಡೆ” ಕಾರ್ಯಕ್ರಮಕ್ಕೆ ಫೆ೧೮ ಶುಕ್ರವಾರದಂದು ಮಾಜಿ ಸಚಿವ ಬಿ ರಮಾನಾಥ ರೈಯವರು ಚಾಲನೆ ನೀಡಿದರು.WhatsApp Image 2022-02-19 at 3.44.03 AM

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು ಧರ್ಮ ಧರ್ಮದ ಮಧ್ಯೆ ಮತ್ತು ಜಾತಿ ಜಾತಿಯ ಮಧ್ಯೆ ಅಶಾಂತಿಯನ್ನು ನಿರ್ಮಿಸಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು. ಬಿಜೆಪಿ ಮುಖಂಡರ ದಬ್ಬಾಳಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ನಮ್ಮ ಪಕ್ಷದ ಕಾರ್ಯಕರ್ತರ ರಕ್ಷಣೆಯೇ ನನ್ನ ಮುಖ್ಯ ಗುರಿ ಎಂದು ಬಣ್ಣಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವಕರು ಕಾಂಗ್ರೆಸ್ ಪಕ್ಷವನ್ನು ಹೆಚ್ಚು ಆಕರ್ಷಿಸಿರುವುದು ಪಕ್ಷಕ್ಕೆ ಶಕ್ತಿ ತುಂಬುವoತಾಗಿದೆ ಎಂದರು. ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಶಕ್ತಿ ನೀಡಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ ಎಂದು ನುಡಿದರು.WhatsApp Image 2022-02-19 at 3.21.15 AM

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪದ್ಮಶೇಖರ್ ಜೈನ್, ಹಿಂದುಳಿದ ವರ್ಗದ ಅಧ್ಯಕ್ಷರಾದ ತಿಮ್ಮಪ್ಪ ಪೂಜಾರಿ ಕುಕ್ಕಿಪಾಡಿ, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಮಹಮ್ಮದ್ ಶರೀಫ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಪೂಜಾರಿ ಜೋರಾ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೀತಾರಾಮ ಶಾಂತಿ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಸುರೇಶ್ ಶೆಟ್ಟಿ ಕುತ್ಲೋಡಿ, ಮಹಮ್ಮದ್ ಸಂಗಬೆಟ್ಟು, ಜಯಕರ ಶೆಟ್ಟಿ, ರಮೇಶ್ ಪೂಜಾರಿ, ಜನಾರ್ಧನ ಬಂಗೇರಾ, ಸದಾಶಿವ ಶೆಟ್ಟಿ, ನಾಗೇಶ್ ಶೆಟ್ಟಿ, ಅನಿಲ್ ಡಿಸೋಜ, ಅಮರ್ ನಾಥ್ ನಾಯ್ಕ್, ಅಶ್ವಥ್ ಶೆಟ್ಟಿ, ಅಶೋಕ್ ಪೂಜಾರಿ, ಆನಂದ ಶೆಟ್ಟಿ, ರಘುರಾಮ್ ಶೆಟ್ಟಿ, ಲೋಕನಾಥ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಭಾರತಿ ಶೆಟ್ಟಿ, ಸುನಿತಾ ಶೆಟ್ಟಿ, ಜಲಜಾಕ್ಷಿ, ಗಿರಿಜಾ ಶೆಟ್ಟಿ, ದೇಜಮ್ಮ, ಅಬ್ದುಲ್ ಬಶೀರ್ ಸಾಹೇಬ್, ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *