ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟ ಸ್ ಎಂಬಲ್ಲಿ ಪೈಂಟರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಇಲ್ಲಿನ ನಿವಾಸಿ ಶೇಖರ ಪೂಜಾರಿ(೪೫) ಎಂದು ಗುರುತಿಸಲಾಗಿದೆ.
ಈತನು ಪ್ರತಿದಿನ ಕುಡಿದು ಬಂದು ಪತ್ನಿ ಮತ್ತು ಮಕ್ಕಳೊಂದಿಗೆ ಜಗಳ ಮಾಡುತ್ತಿದ್ದು, ಶನಿವಾರ ತಡರಾತ್ರಿ ಮನೆಯ ಸ್ನಾನಗೃಹದ ಪಕ್ಕಾಸಿಗೆ ನೇಣು ಹಾಕಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆ ಎಸೈ ಹರೀಶ್ ನೇತೃತ್ವದ ಪೊಲೀಸರು ಭಾನುವಾರ ಬೆಳಿಗ್ಗೆ ಬಂದು ಸ್ಥಳ ಪರಿಶೀಲನೆ ನಡೆಸಿದರು.