ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿನಲ್ಲಿ ‘ವಿಶ್ವ ಮಹಿಳಾ ದಿನಾಚರಣೆ’ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ‘ಸಂಜೀವಿನಿ ಮಾಸಿಕ ಸಂತೆ’ ಸಭಾ ಕಾರ್ಯಕ್ರಮವನ್ನು ಗ್ರಾ.ಪಂ.ಅಧ್ಯಕ್ಷೆ ರತ್ನಾ ಆನಂದ ಉದ್ಘಾಟಿಸಿದರು.
ರಾಜ್ಯದಲ್ಲಿ ಸ್ವಾವಲಂಬಿ ಆರ್ಥಿಕ ಚಟುವಟಿಕೆ ನಡೆಸುತ್ತಿರುವ ಎಲ್ಲಾ ವಿವಿಧ ಸ್ತ್ರೀಶಕ್ತಿ ಮತ್ತಿತರ ಸಂಘಟನೆ ಸದಸ್ಯರಿಗೆ ‘ಸಂಜೀವಿನಿ’ ಯೋಜನೆಯಡಿ ಸ್ವ ಉದ್ಯೋಗ ತರಬೇತಿ ಸಹಿತ ಆರ್ಥಿಕ ನೆರವು ನೀಡುವ ಮೂಲಕ ಅವರಲ್ಲಿ ಉದ್ಯಮಶೀಲತೆ ಕೌಶಲ್ಯ ಅಭಿವೃದ್ಧಿಗೊಳಿಸಲು ಸರ್ಕಾರ ಮುಂದಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಹೇಳಿದ್ದಾರೆ.
ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಬಳಿ ಮಂಗಳವಾರ ಏರ್ಪಡಿಸಿದ್ದ ಸರ್ಕಾರಿ ಪ್ರಾಯೋಜಿತ ‘ಸಂಜೀವಿನಿ ಮಾಸಿಕ ಸಂತೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ನಡೆದ ಈ ವಿನೂತನ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಎಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಲಿದೆ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾ ಆನಂದ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಶುಭ ಹಾರೈಸಿದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಮಾತನಾಡಿ, ಗುಣಮಟ್ಟದ ‘ಸಂಜೀವಿನಿ ಉತ್ಪನ್ನ’ಗಳಿಗೆ ಅಂತರ್ ರಾಷ್ಟಿçÃಯ ಮಾರುಕಟ್ಟೆ ಸಿಗಲಿದೆ ಎಂದರು. ಗ್ರಾ.ಪಂ.ಸದಸ್ಯರಾದ ಸಂತೋಷ್ ಕುಮಾರ್ ಬೆಟ್ಟು, ಸಂತೋಷ್ ಗೌಡ, ಯಶೋಧ ನಾಯ್ಕ್, ರವೀಂದ್ರ ಪೂಜಾರಿ, ಶೋಭಾ ಸಪಲ್ಯ, ಉಷಾ ಸಂತೋಷ್, ಗುಣವತಿ, ಪುಷ್ಪಾವತಿ, ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಮಾಜಿ ಉಪಾಧ್ಯಕ್ಷೆ ಪುಷ್ಪಲತಾ, ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಶ್ಯಾಮಲಾ ಕೊಯಿಲ ಇದ್ದರು.
ಇದೇ ವೇಳೆ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ತಂಡದ ಮಹಿಳಾ ಸದಸ್ಯರಿಂದ ತರಕಾರಿ ಸಹಿತ ವಿವಿಧ ಗೃಹ ಉತ್ಪನ್ನ ಪ್ರದರ್ಶನ ಮತ್ತು ಮಾರಾಟ ಹಾಗೂ ಸಾಧಕರಿಗೆ ಸನ್ಮಾನ ನಡೆಯಿತು. ಪಿಡಿಒ ಮಧು ಟಿ.ಎಲ್. ಸ್ವಾಗತಿಸಿ, ಶಶಿಕಲಾ ಶೆಟ್ಟಿ ವಂದಿಸಿದರು. ದಿನೇಶ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.