ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಗುರುವಾರ ಕಂಬಳ ಆಮಂತ್ರಣಪತ್ರ ಬಿಡುಗಡೆಗೊಳಿಸಿದರು. ಸಮಿತಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಮತ್ತಿತರರು ಇದ್ದಾರೆ.14btl-Rai

ಇಲ್ಲಿನ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ ೧೧ ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳವು ಇದೇ ೧೭ರಂದು ‘ಬಂಟ್ವಾಳ ಕಂಬಳ’ ಎಂಬ ಹೆಸರಿನಲ್ಲಿ ನಡೆಯಲಿದೆ ಎಂದು ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಹೇಳಿದ್ದಾರೆ.

ಬಿ.ಸಿ.ರೋಡಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಅತೀ ಕಡಿಮೆ ಅವಧಿಯಲ್ಲಿ ಕಂಬಳದ ಕರೆ ನಿರ್ಮಿಸಿ ಕಂಬಳ ಕೂಟ ಆಯೋಜಿಸಿರುವುದು ಕಂಬಳ ಇತಿಹಾಸದಲ್ಲೇ ಪ್ರಥಮ. ಈ ವರ್ಷದ ಕಡೇ ಕಂಬಳ ವೈಶಿಷ್ಟ್ಯಪೂರ್ಣ ಮತ್ತು ‘ಬಂಟ್ವಾಳ ಕಂಬಳ’ವಾಗಿ ಮೂಡಿ ಬರಲಿದೆ ಎಂದರು.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಆಶೀರ್ವಾದ ಪಡೆದು ನಡೆಸುತ್ತಿರುವ ಈ ಕಂಬಳ ಕೂಟಕ್ಕೆ ಸೊಲೂರು ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ, ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ, ಅಲ್ಲಿಪಾದೆ ಸಂತ ಅಂತೊನಿ ಚರ್ಚ್ ಧರ್ಮಗುರು ಫೆಡ್ರಿಕ್ ಮೊಂತೆರೊ, ಸುಲ್ತಾನ್ ನಗರ ಬದ್ರಿಯಾ ಜುಮ್ಮಾ ಮಸೀದಿ ಧರ್ಮಗುರು ಮೊಹಮ್ಮದ್ ನಾಸೀಹ್ ದಾರಿಮಿ, ಕಾವಳಕಟ್ಟೆ ಹಝ್ರತ್ ಡಾ.ಮೌಲಾನ ಫಾಝಿಲ್ ರಿಝ್ವಿ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಗುವುದು. ಅಂದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಎಸ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇAದ್ರ ಕುಮಾರ್ ಸಹಿತ ಹಲವಾರು ಮಂದಿ ಗಣ್ಯರು ಮತ್ತು ತುಳು ಚಲನಚಿತ್ರ ಕಲಾವಿದರು ಭಾಗವಹಿಸುವರು ಎಂದು ವಿವರಿಸಿದರು.

ಕಳೆದ ೧೮ ವರ್ಷಗಳ ಹಿಂದೆ ಕಾವಳಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ೧೦ವರ್ಷ ‘ಮೂಡೂರು-ಪಡೂರು’ ಕಂಬಳ ಅದ್ದೂರಿಯಾಗಿ ನಡೆದು ಬಳಿಕ ಸ್ಥಗಿತಗೊಂಡಿತ್ತು. ಇದೀಗ ಕಂಬಳ ಕೋಣಗಳ ಮಾಲೀಕರು ಮತ್ತು ಕಂಬಳಾಸಕ್ತರ ಆಶಯದಂತೆ ಮತ್ತೆ ಅದೇ ಹೆಸರಿನಲ್ಲಿ ಮತ್ತೆ ಮುಂದುವರಿಯುತ್ತಿದೆ ಎಂದರು.

ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್, ಸಂಚಾಲಕ ಬಿ.ಪದ್ಮಶೇಖರ್ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಪಾಧ್ಯಕ್ಷರಾದ ಅವಿಲ್ ಮಿನೇಜಸ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸುದರ್ಶನ ಜೈನ್, ಕೆ. ಮಾಯಿಲಪ್ಪ ಸಾಲ್ಯಾನ್, ಕೋಶಾಧಿಕಾರಿ ಫಿಲಿಪ್ ಫ್ರಾಂಕ್, ಸಮಿತಿ ಸದಸ್ಯರಾದ ಶಬೀರ್, ಡೆನ್ಜಿಲ್ ನೊರೋನ್ಹ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *