ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಆ.12ರಂದು ಶುಕ್ರವಾರ ನಡೆದ ತಿರಂಗ ಯಾತ್ರೆಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು.

ಸಂಸ್ಥೆ ಮುಖ್ಯಸ್ಥ ಡಾ.ಕೆ.ಪ್ರಭಾಕರ ಭಟ್, ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹ ಸಂಚಾಲಕ ರಮೇಶ್, ದಿನೇಶ ಅಮ್ಟೂರು, ಕುಶಾಲಪ್ಪ ಗೌಡ ಸಹಿತ ೨ಸಾವಿರಕ್ಕೂ ಮಿಕ್ಕಿ ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡರು.