ಬಂಟ್ವಾಳ: ಯಕ್ಷಗಾನ ದೇವತಾರಾಧನೆಯ ಅಪೂರ್ವವಾದ ದೈವಿಕ ಕಲೆ. ಯಕ್ಷಗಾನ ಕೇವಲ ಮನೋರಂಜನೆಗಾಗಿ ಅಲ್ಲ, ಆಧ್ಯಾತ್ಮಿಕ, ಬೌದ್ಧಿಕ ವಿಕಸನಕ್ಕೆ ಪೂರಕವಾಗಿದೆ. ಯಕ್ಷಗಾನವನ್ನು ಉಳಿಸಿ, ಬೆಳೆಸಲು ಪ್ರೋತ್ಸಾಹ ನೀಡಬೇಕು ಎಂದು ರಾಜ್ಯ ಯಕ್ಷಗಾನ ಬಯಲಾಟ ಅಕಾಡೆಮಿ ಮಾಜಿ ಸದಸ್ಯಸರಪಾಡಿ ಅಶೋಕ ಶೆಟ್ಟಿ ಅವರು ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯಕ್ತ ಯಕ್ಷಾಭಿಮಾನಿಗಳು ಪುಂಜಾಲಕಟ್ಟೆ ಇದರ ವತಿಯಿಂದ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಪುಂಜಾಲಕಟ್ಟೆ, ಶ್ರೀ ಮುರುಘೇಂದ್ರ ವನಿತಾ ಸಮಾಜ ಪುಂಜಾಲಕಟ್ಟೆ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ, ಯಕ್ಷಧ್ರುವ ಪಟ್ಲ ಫೌಂಡೇಶನ್, ಪುಂಜಾಲಕಟ್ಟೆ ಘಟಕ, ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ತಾಲೂಕು ಇವರ ಸಹಕಾರದಲ್ಲಿ ರಾಯಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕೇಂದ್ರದವರಿಂದ ಪುಂಜಾಲಕಟ್ಟೆ ಬಂಗ್ಲೆಮೈದಾನದಲ್ಲಿ ನಡೆದ ಯಕ್ಷಗಾನ ಬಯಲಾಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ಅಧ್ಯಕ್ಷ ಕೆ.ಲಕ್ಷ್ಮೀ ನಾರಾಯಣ ಉಡುಪ, ಯಕ್ಷವಾಸ್ಯಂ ಕಾರಿಂಜ ಇದರ ಸಂಚಾಲಕಿ ಸಾಯಿ ಸುಮಾ ನಾವಡ ಕಾರಿಂಜ, ಯಕ್ಷ ಕೂಟ ಮಧ್ವ ಇದರ ಅಧ್ಯಕ್ಷ ಭಾಸ್ಕರ ಶೆಟ್ಟಿ ಮಧ್ವ, ತು.ರ.ವೇ. ಬಂಟ್ವಾಳದ ಅಧ್ಯಕ್ಷ ರಮೇಶ ಶೆಟ್ಟಿ ಮಜಲೋಡಿ, ರಾಯಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕೇಂದ್ರದ ಹರಿಪ್ರಸಾದ್ ರಾವ್ ರಾಯಿ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಯಕ್ಷಗುರು ಪ್ರೇಮ್ ರಾಜ್ ಕೊಲ ಅವರನ್ನು ಗೌರವಿಸಲಾಯಿತು.
ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಹರೀಶ್ಚಂದ್ರ ಶೆಟ್ಟಿ ಗಾರ್ ವಂದಿಸಿದರು. ರತ್ನದೇವ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕುಮಾರ ವಿಜಯ ಯಕ್ಷಗಾನ ಬಯಲಾಟ ನಡೆಯಿತು.