ಬಂಟ್ವಾಳ : ಬ್ಲಾಕ್ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈಯವರ 71 ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸೆ. 13 ರಂದು ಮಂಗಳವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆಗೆ ದಾಖಲಾದವರಿಗೆ* ಹಣ್ಣು ಹಂಪಲು ವಿತರಿಸಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್ ಮಹಮ್ಮದ್, ಪದ್ಮಶೇಖರ್ ಜೈನ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

