ಬಂಟ್ವಾಳ: ಮಂಗಳೂರು ಶಕ್ತಿನಗರದ ಸರಕಾರಿ ಪ್ರೌಢಶಾಲೆ ನಾಲ್ಯಪದವು ಎಂಬಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಬಾಲಕಿಯರ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿನ ಎಸ್.ವಿ.ಎಸ್ ಇಂಗ್ಲಿಷ್ ಸ್ಕೂಲ್ ವಿದ್ಯಾಗಿರಿ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದು ೭ನೇ ತರಗತಿ ವಿದ್ಯಾರ್ಥಿನಿಯರಾದ ನಿಹಾ ಎನ್. ಕುಂದರ್, ಅನುಷ್ಕ ಶೆಟ್ಟಿ ಮತ್ತು ಖುಷಿ ಪಿ. ಇವರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರನ್ನು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಉಪಾಧ್ಯಕ್ಷೆ ವತ್ಸಲಾ ಕಾಮತ್, ಕರ‍್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ, ಅನಿರುದ್ಧ ಕಾಮತ್, ಎಸ್.ವಿ.ಎಸ್ ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ, ಮುಖ್ಯೋಪಾಧ್ಯಾಯರು, ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.