ಬಂಟ್ವಾಳ: ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಇಂದು ಭಾನುವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯನ್ನು ಆಚರಿಸಲಾಯಿತು.


ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅವರು ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಿತ್ತೂರು ರಾಣಿ ಚೆನ್ನಮ್ಮ ಎಳೆ ವಯಸ್ಸಿನಲ್ಲೇ ಕುದುರೆ ಸವಾರಿ, ಕತ್ತಿವರಸೆ, ಮತ್ತು ಬಿಲ್ಲುಗಾರಿಕೆಯಲ್ಲಿ ತರಬೇತಿ ಪಡೆದಿದ್ದರು. ಬ್ರಿಟಿಷರು ಅಪಾರ ಸೈನ್ಯದೊಂದಿಗೆ ಮುತ್ತಿಗೆ ಹಾಕಿ ಕಿತ್ತೂರಿನ ಮೇಲೆ ದಾಳಿ ಮಾಡಿದಾಗ ದಿಟ್ಟತನದಿಂದ ಅವರನ್ನು ಎದುರಿಸಿ ತಮ್ಮ ಶೌರ್ಯ ಮೆರೆದರು ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.


ತಾಲೂಕು ಚುನಾವಣೆ ಶಾಖೆಯ ಪ್ರಥಮ ದರ್ಜೆ ಸಹಾಯಕ ನಾರಾಯಣ ಗೌಡ ಸ್ವಾಗತಿಸಿ ವಂದಿಸಿದರು.

By suddi9

Leave a Reply

Your email address will not be published. Required fields are marked *