ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಸುಮಂಗಲಾ ಸಭಾಂಗಣದಲ್ಲಿ ವಿಶ್ವ ಗಾಣಿಗರ ಚಾವಡಿ ವತಿಯಿಂದ ಎರಡನೇ ವರ್ಷದ ಮಹಾಸಭೆ ಮತ್ತು ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಇದೇ ೬ರಂದು ಬೆಳಿಗ್ಗೆ ೯ಗಂಟೆಗೆ ನಡೆಯಲಿದೆ. ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಕಾರ್ಯಕ್ರಮ ಉದ್ಘಾಟಿಸಲಿದ್ದು, ಗಾಣಿಗ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.