ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಐದಾರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದಾಗ ಅಲ್ಲಿಗೆ ಪೂರೈಕೆಯಾದ ಅಕ್ಕಿಯಲ್ಲಿ ಹುಳ ಕಂಡು ಬಂದಿದ್ದು, ಈ ಕಳಪೆ ಗುಣಮಟ್ಟದ ಅಕ್ಕಿ ಪೂರೈಸಿದ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ.

ಇಲ್ಲಿನ ಬಿ.ಸಿ.ರೋಡು ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಗರ್ಭಿಣಿ ಮತ್ತು ಬಾಣಂತಿಯರಿAದ ಹಿಡಿದು ಪುಟಾಣಿ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಿಸುವ ಅಂಗನವಾಡಿ ಕೇಂದ್ರದಲ್ಲಿ ಕೋಳಿಗೆ ಹಾಕುವಂತಹ ಕಳಪೆ ಆಹಾರ ಪೂರೈಕೆ ಅಕ್ಷಮ್ಯ ಅಪರಾಧ. ಇದಕ್ಕೆ ಕನಿಷ್ಟ ಗೌರವಧನಕ್ಕೆ ದುಡಿಯುತ್ತಿರುವ ಅಲ್ಲಿನ ಕಾರ್ಯಕರ್ತೆಯರನ್ನು ಹೊಣೆಗಾರರು ಅಲ್ಲ. ಈ ಕಳಪೆ ಗುಣಮಟ್ಟದ ಅಕ್ಕಿ ಪೂರೈಸಿದ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದಲ್ಲಿ ಅವರಿಗೆ ದೇವರೇ ಶಿಕ್ಷೆ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ೬ ಅವಧಿಗೆ ಶಾಸಕನಾಗಿ, ೧೫ ವರ್ಷ ಸಚಿವನಾಗಿ ಪ್ರಾಮಾಣಿಕ ರಾಜಕೀಯ ಬದುಕು ನಡೆಸುತ್ತಿದ್ದು, ನನಗೆ ಮರಳು ಅಥವಾ ಮಣ್ಣಿನ ವ್ಯಾಪಾರ ಇಲ್ಲ ಎಂದರು. ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕರಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಬಡಕಬೈಲ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *