ಬಂಟ್ವಾಳ: ಪ್ರಕೃತಿ ರಮಣೀಯ ಗ್ರಾಮೀಣ ಪ್ರದೇಶದಲ್ಲಿ ನೆಲೆ ನಿಂತ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಲಕ್ಷ್ಮೀ ಸಹಿತ ಗಣಪತಿ ಮತ್ತು ಗುರು ರಾಘವೇಂದ್ರ ಸ್ವಾಮಿ ಬಿಂಬ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕದಿಂದ ದೇವರ ಸಾನಿಧ್ಯ ವೃದ್ಧಿ ಜೊತೆಗೆ ಅಲ್ಲಿನ ಊರಿನ ಬೆಳವಣಿಗೆಯೂ ಸಾಧ್ಯವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಬ್ರಹ್ಮಕಲಶೋತ್ಸವಕ್ಕೆ ಭೇಟಿ ನೀಡಿ ಅವರು ಆಶೀರ್ವಚನ ನೀಡಿದರು.
ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್. ಪಂಡಿತ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ. ತುಂಗಪ್ಪ ಬಂಗೇರ, ಪ್ರಮುಖರಾದ ಎಂ.ಬೂಬ ಸಪಲ್ಯ ಮುಂಡಬೈಲು, ಕೆ.ಬಾಬು ಸಪಲ್ಯ ವಗ್ಗ, ನಾಗೇಶ ಕಲ್ಲಡ್ಕ, ಉಮೇಶ ಬೋಳಂತೂರು, ಸಂಜೀವ ಪೂಜಾರಿ ಪಿಲಿಂಗಾಲು, ಮೋಹನ್ ಕೆ.ಶ್ರೀಯಾನ್ ರಾಯಿ, ವೀರೇಂದ್ರ ಅಮೀನ್, ದೇವಪ್ಪ ಕುಲಾಲ್, ಜಗದೀಶ ಕುಂದರ್, ನವೀನ್ ಕೋಟ್ಯಾನ್, ಅಭಿಷೇಕ್ ಪಿಲಿಂಗಾಲು, ದಿನೇಶ ಕಾಡಬೆಟ್ಟು ಮತ್ತಿತರರು ಇದ್ದರು.
ಇದೇ ವೇಳೆ ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ವಕೀಲ ಅಶ್ವನಿ ಕುಮಾರ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಅಕ್ರಮ ಸಕ್ರಮ ಸಮಿತಿ ಮಾಜಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರಿ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಬದನಡಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ ಮತ್ತಿತರ ಗಣ್ಯರು ಭೇಟಿ ನೀಡಿದರು.