ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಇದರ ಮಾಣಿ ವಲಯದ ನೆಟ್ಲಮುಡ್ನೂರು ಕಾರ್ಯಕ್ಷೇತ್ರ ವ್ಯಾಪ್ತಿಯ ನೇರಳಕಟ್ಟೆಯಲ್ಲಿ “ಹೊಸಬೆಳಕು” ನೂತನ ಜ್ಞಾನ ವಿಕಾಸ ಕೇಂದ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆಯ ಸದಸ್ಯರಾದ ತನಿಯಪ್ಪ ಗೌಡ ರವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮಹಿಳೆಯರ ಸಂಘಟನಾತ್ಮಕ ಅಭಿವೃದ್ಧಿಗಾಗಿ ರೂಪಿಸಿದ ಈ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರುವಂತೆ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಜನೆಯ ನೇರಳಕಟ್ಟೆ ಒಕ್ಕೂಟದ ಅಧ್ಯಕ್ಷರಾದ ಲೀಲಾವತಿ ವಹಿಸಿದ್ದರು.
ವಿಟ್ಲ ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ವಿಜಯಲಕ್ಷ್ಮಿ ಸ್ವಾಗತಿಸಿ,ಮಾಣಿ ವಲಯದ ಮೇಲ್ವಿಚಾರಕಿ ಶ್ರೀಮತಿ. ಆಶಾ ಪಾರ್ವತಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಸೇವಾಪ್ರತಿನಿಧಿ ಗಣೇಶ್ ವಂದಿಸಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.