ಪತ್ರಿಕಾ ಏಜೆಂಟ್, ನಂದಿನಿ ಮಿಲ್ಕ್ ಪಾರ್ಲರ್ ಮಾಲಕ ವಸಂತ ಆಚಾರ್ಯ (56) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ ಆಚಾರ್ಯ ಅವರು ಕೊಡುಗೈ ದಾನಿಯಾಗಿದ್ದು, ವಿಶ್ವಕರ್ಮ ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿದ್ದರು. ಅದಲ್ಲದೇ, ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.


ಇಂದು ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂತಿರುಗುವ ಸಂದರ್ಭದಲ್ಲಿ ಅವರಿಗೆ ಹಠಾತ್ ಆಗಿ ಎದೆನೋವು ಕಾಣಿಸಿಕೊಂಡಿದೆ. ಆ ಕೂಡಲೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

By suddi9

Leave a Reply

Your email address will not be published. Required fields are marked *