ಬಂಟ್ವಾಳ: ಮಹಿಳೆಯರು ಕಾನೂನುಗಳ ಮಾಹಿತಿಯನ್ನು ಪಡೆದುಕೊಂಡಾಗ ಸಾಮಾಜಿಕ ಪರಿವರ್ತನೆ ಸಾಧ್ಯ ಎಂದು ಸಜೀಪ ಮುನ್ನೂರು ಗ್ರಾ.ಪಂ.ಅಧ್ಯಕ್ಷೆ ಸರಸ್ವತಿ ಅವರು ಹೇಳಿದರು. ಅವರು ಗ್ರಾ.ಪಂ.ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದಿ ಇಲಾಖೆಯ ವತಿಯಿಂದ ನಡೆದ ನಡೆದ ಮಹಿಳಾ ಕಾನೂನು ಅರಿವು ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಹಿಳಾ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಮಹಿಳೆಯರಿಗೆ ಕಾನೂನಿ ಅರಿವು ಮತ್ತು ಮಾಹಿತಿ ಕಾರ್ಯಕ್ರಮಗಳು ಅಗತ್ಯ ಎಂದು ಹೇಳಿದರು. ಶಿಶು ಅಭಿವೃದಿ ಯೋಜನಾಧಿಕಾರಿ ಮಲ್ಲಿಕಾ ಕಾರ್ಯಕ್ರವನ್ನು ಉದ್ಘಾಟಿಸಿದರು. ವಕೀಲೆ ಶೋಭಲತಾ ಸುವರ್ಣ ಕಾನೂನಿನ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಅಭಿವೃದ್ದಿ ಅಧಿಕಾರಿ ನಮಿತಾ ಉಪಸ್ಥಿತರಿದ್ದರು. ವನಜಾಕ್ಷಿ ಸ್ವಾಗತಿಸಿ ವಂದಿಸಿದರು. ಮೇಲ್ವಿಚಾರಕಿ ಭಾರತಿ ಕಾರ್ಯಕ್ರಮ ನಿರೂಪಿಸಿದರು.