ಬಂಟ್ವಾಳ; ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ” ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮ” ನಡೆಯಿತು.

ತಾ.ಪಂ. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾದ ಸಚಿನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ ಅವರು ಡೆಂಗ್ಯೂ ನಿಯಂತ್ರಣ ಕುರಿತು ಮಾಹಿತಿ ನೀಡಿದರು.
ಅಡ್ಯನಡ್ಕ ಪ್ರಾ. ಆ. ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ವಿಶ್ವೇಶ್ವರ ಅವರು ಡೆಂಗ್ಯೂ ರೋಗಕ್ಕೆ ಕಾರಣ, ವಿಧಾನ, ಲಕ್ಷಣ ಹಾಗೂ ಈಡೀಸ್ ಲಾರ್ವಾ ನಿಯಂತ್ರಣದಲ್ಲಿ ಪಂಚಾಯತ್ ರಾಜ್ ಇಲಾಖೆಯ ಪಾತ್ರ ಮತ್ತು ಸಮುದಾಯದ ಪಾತ್ರ ಕುರಿತು ಉಪನ್ಯಾಸ ನೀಡಿದರು. ಡಿವಿಬಿಡಿಸಿಓ ಕಛೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಲೀಂಪಾಷ ಸೊಳ್ಳೆ ನಿಯಂತ್ರಣ ಕ್ರಮಗಳು ಮತ್ತು ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಿದರು. ನರೇಗಾ ಸಹಾಯಕ ನಿರ್ದೇಶಕರಾದ ವಿಶ್ವನಾಥ್, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ನೋಣಯ್ಯ, ಡಿವಿಬಿಡಿಸಿಓ ಕಛೇರಿಯ ಪ್ರಭಾರ ಆರೋಗ್ಯ ಮೇಲ್ವಿಚಾರಕರಾದ ರುದ್ರೇಶ್ ರವರು , ಆರೋಗ್ಯ ನಿರೀಕ್ಷಣಾಧಿಕಾರಿ ರಾಕೇಶ್ ಉಪಸ್ಥಿತರಿದ್ದರು, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಮತಿ ಕುಸುಮ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು ಬಂಟ್ವಾಳ ತಾಲ್ಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.