ಬಂಟ್ವಾಳ: ಇತ್ತೀಚಿನ ದಿನಗಳಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ವ್ಯತಿರಿಕ್ತ ಪರಿಣಾಮಗಳು ಉದ್ಭವಿಸುತ್ತಿದ್ದು ಕಾನೂನಿನ ಅರಿವು ಕೊರತೆಯಿಂದಾಗಿ ವಿನಾ ಕಾರಣ ಸಮಸ್ಯೆಗಳು ಸೃಷ್ಟಿಯಾಗುತ್ತಿದ್ದು ಈ ನಿಟ್ಟಿನಲ್ಲಿ ಯುವಜನತೆ ಕಾನೂನು ಪಾಲನೆಯಲ್ಲಿ ಮಹತ್ವರ ಪಾತ್ರವಹಿಸಬೇಕಾಗುತ್ತದೆ. ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಉಪನಿರೀಕ್ಷಕರಾದ ರಕ್ಷಿತ್ ಅಭಿಪ್ರಾಯಪಟ್ಟರು.

ಅವರು ಸಂಗಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಸ್ನಾನಕೋತ್ತರ ಸಮಾಜಕಾರ್ಯ ವಿಭಾಗ ಆಳ್ವಾಸ್ ಕಾಲೇಜು ಮೂಡಬಿದ್ರೆ, ರೋಟರಿ ಸಮುದಾಯ ದಳ ಸಿದ್ಧಕಟ್ಟೆ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಸ.ಪ್ರ.ದರ್ಜೆ ಕಾಲೇಜು ಸಿದ್ಧಕಟ್ಟೆ, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಸುವ್ಯಸವ್ಥೆಯಲ್ಲಿ ಯುವಜನತೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರಸನ್ನ ಕುಮಾರ್ ಎಚ್, ರೋಟರಿ ಸಮುದಾಯ ದಳದ ಸದಸ್ಯ ವಾಸುದೇವ ಆಚಾರ್, ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಭಾಕರ ಪ್ರಭು, ಗ್ರಾ.ಪಂ. ಸದಸ್ಯರಾದ ಮಾಧವ ಶೆಟ್ಟಿಗಾರ್, ಉಮ್ಮರ್ ಫಾರೂಕ್, ಬೆನೆಡಿಕ್ಟ ಡಿ’ಕೋಸ್ತ, ಪಂಚಾಯತ್ ಅಭಿವೃದ್ದಿ ಅಧಿಕಾರಿಯಾದ ಪದ್ಮನಾಭ ವಿ.ಸಾಲ್ಯಾನ್, ಆಳ್ವಾಸ್ ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿಭಾಗದ ವಿದ್ಯಾರ್ಥಿಗಳಾದ ಆಸೀಫ್, ವೀಣಾ, ಸಂಧ್ಯಾ, ಎನ್.ಎಸ್.ಎಸ್. ಘಟಕದ ನಾಯಕ ಉಮೇಶ್, ನಾಯಕಿ ದೀಕ್ಷಾ ಉಪಸ್ಥಿತರಿದ್ದರು. ಮಾನಸ ಸ್ವಾಗತಿಸಿ, ಶಾಲಿನಿ ವಂದಿಸಿದರು. ಜಸ್ಮಿನ ಮರೀನಾ ಫಲೇರಾ ಕಾರ್ಯಕ್ರಮ ನಿರೂಪಿಸಿದರು.