ಬಂಟ್ವಾಳ: ಸಜೀಪಮೂಡ ಗ್ರಾಮದ ಜಾಡಕೋಡಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಶಿಲಾನ್ಯಾಸವನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾಡಿ.ಎಸ್.ಗಟ್ಟಿ, ತಾಲೂಕು ಪಂಚಾಯತ್ ಸದಸ್ಯೆ ಪುಷ್ಪಾವತಿ, ಸಜೀಪ ಮೂಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ, ಉಪಾಧ್ಯಕ್ಷೆ ಗೀತಾ, ಸದಸ್ಯರಾದ ವಿಶ್ವನಾಥ ಬೆಳ್ಚಾಡ ಸಂಜೀವ ಪೂಜಾರಿ, ದೇವಿ ಪ್ರಸಾದ್ ಪೂಂಜ, ಪ್ರಮುಖರಾದ ಅಬ್ಬಾಸ್ ಆಲಿ, ಅಝೀಝ್ ಬೊಳ್ಳಾಯಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನರೇಂದ್ರ ಬಾಬು, ಕಿರಿಯ ಇಂಜಿನಿಯರ್ ಅಜಿತ್ ಮೊದಲಾದವರು ಉಪಸ್ಥಿತರಿದ್ದರು.
