ಬಂಟ್ವಾಳ : ಪುಂಜಾಲಕಟ್ಟೆ ಶ್ರೀ ರಾಮ ನಗರ ಶ್ರೀ ರಾಮಾಂಜನೇಯ ಭಜನ ಮಂದಿರದಲ್ಲಿ ಹನುಮ ಜಯಂತಿ ಪ್ರಯುಕ್ತ ಎ.ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ 5ರಂದು ಜರಗಲಿದೆ. ಬೆಳಗ್ಗೆ ಗಣಹೋಮ, ವೆಂಕಟರಮಣ ಮುಚ್ಚಿನ್ನಾಯ ಅವರ ನೇತೃತ್ವದಲ್ಲಿ ಸಾಮಾಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭ, ಮಧ್ಯಾಹ್ನ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಭಜನೆ ನಡೆಯಲಿದೆ. 8.30ಕ್ಕೆ ಧಾರ್ಮಿಕ ಸಭೆಯಲ್ಲಿ ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಅಧ್ಯಕ್ಷತೆ ವಹಿಸಲಿರುವರು. ಪುತ್ತೂರು ಶ್ರೀ ವಿವೇಕಾನಂದ ಕಾಲೇಜು ಉಪನ್ಯಾಸಕ ಶ್ರೀಷ ಕುಮಾರ್ ಅವರು ಧಾರ್ಮಿಕ ಉಪನ್ಯಾಸ ನೀಡಲಿರುವರು. ಮಡಂತ್ಯಾರು ಜನಜಾಗೃತಿ ವೇದಿಕೆ ಅಧ್ಯಕ್ಷ , ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕುಕ್ಕಳ ಒಕ್ಕೂಟದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಕೊಂಕಡ್ಡ , ಮಡಂತ್ಯಾರು ಗ್ರಾ.ಪಂ.ಸದಸ್ಯ ರಾಜಶೇಖರ ಶೆಟ್ಟಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಬಳಿಕ ಬಜಪೆ ತಲಕಳ ಶ್ರೀ ಕಾಶೀ ವಿಶ್ವನಾಥೇಶ್ವರ ಮಹಾಗಣಪತಿ ಯಕ್ಷಗಾನ ಮಂಡಳಿ ಅವರಿಂದ ಧರ್ಮದೈವ ಶ್ರೀ ರಕ್ತೇಶ್ವರಿ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಅಧ್ಯಕ್ಷ ಶ್ರೀನಿವಾಸ ಪಿ. ಅತ್ತಾಜೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.