ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ವಿಚಾರಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆೆಳವಣಿಗೆಗೆ ಸಹಕಾರಿಯಾಗಬಲ್ಲದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಹೇಳಿದರು.
ಶ್ರೀ ವೆಂಕಟರಮಣ ಸ್ವಾಮಿ ಪದವಿ ಕಾಲೇಜು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಬೇಸಿಗೆ ಶಾಲೆ ಎಂಬ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ವಿಷಯ ತಿಳಿದುಕೊಳ್ಳುವುದರ ಜೊತೆಗೆ ಪಠ್ಯಕ್ಕೆ ಪೂರಕವಾದ ಮಾಹಿತಿಯನ್ನು ನೀಡಿ ಸಮಾಜದಲ್ಲಿ ಯೋಗ್ಯ ವ್ಯಕ್ತಿಯನ್ನಾಗಿ ರೂಪಿಸಲು ಸಹಪಠ್ಯ ಚಟುವಟಿಕೆಗಳು ಉಪಯುಕ್ತಕಾರಿ. ಅದಕ್ಕೆ ಸೂಕ್ತ ಮಾರ್ಗದರ್ಶನದ ಅಗತ್ಯತೆ ಇದೆ ಎಂದರು.

ವಿದ್ಯಾರ್ಥಿಗಳಲ್ಲಿ ಅಡಗಿರುವ ಕ್ರಿಯಾಶೀಲ ಸೃಜನಾತ್ಮಕತೆಗೆ ಪ್ರೇರಣೆ ನೀಡಲು ಬೇಸಿಗೆ ಶಾಲೆಯಂತಹ ತರಬೇತಿ ಶಿಬಿರಗಳು ಪ್ರಯೋಜನಕಾರಿ ಎಂದು ಹೇಳಿದರು.
ಕಾಲೇಜು ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಉಪಪ್ರಾಂಶುಪಾಲ ಪ್ರೊ. ತುಕಾರಂ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ಸಕೀನಾ ನಾಸರ್ ಪ್ರಾಸ್ತವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕಿ ವಿನಂತಿ ಗೋಪಾಲಕೃಷ್ಣ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.