ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಮಿನಿ ವಿಧಾನಸೌಧ ನಿರ್ಮಾಣಗೊಳ್ಳಲಿರುವ ಹಿನ್ನೆಲೆಯಲ್ಲಿ ರೂ 8ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ತಾತ್ಕಾಲಿಕ ತಾಲ್ಲೂಕು ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಸೋಮವಾರ ಉದ್ಘಾಟಿಸಿದರು. ಉಪವಿಭಾಗಾಧಿಕಾರಿ ಡಾ.ಅಶೋಕ್, ತಹಶೀಲ್ದಾರ್ ಪುರಂದರ ಹೆಗ್ಡೆ, ಪುರಸಭಾಧ್ಯಕ್ಷೆ ವಸಂತಿ ಮತ್ತಿತರರು ಇದ್ದರು.