ಬಂಟ್ವಾಳ: ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಯ ವೇದವ್ಯಾಸ ಧ್ಯಾನಮಂಟಪದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ರೂಪಕಲಾ ಮಾತಾಜಿ ಇವರು ಅಂಬೇಡ್ಕರರ ಜೀವನದ ಘಟನೆಗಳನ್ನು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ತಾಲೂಕು ಪಂಚಾಯತ್ ಸದಸ್ಯ ದಿನೇಶ್ ಅಮ್ಟೂರು ಹಿಂದಿನ ಕಾಲದಲ್ಲಿದ್ದ ಅಸ್ಪ್ರಶ್ಯತೆಯ ಬಗ್ಗೆ ಹಾಗೂ ಪ್ರಸ್ತುತ ದಿನಗಳಲ್ಲಿ ಆದ ಬದಲಾವಣೆಗಳನ್ನು ತಿಳಿಸುತ್ತಾ ಶುಭ ಹಾರೈಸಿದರು.
ambedkar jayanthi 2015 apr primery
ವೇದಿಕೆಯಲ್ಲಿ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವಗಿರಿ ಸತೀಶ್ ಭಟ್ ಹಾಗೂ ಮುಖ್ಯೋಪಾಧ್ಯಾರಾದ ರವಿರಾಜ್ ಕಣಂತೂರ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶ್ವೇತ ಮಾತಾಜಿ ನಿರೂಪಿಸಿ, ಸಂತೋಷ್ ಶ್ರೀಮಾನ್ ಸ್ವಾಗತಿಸಿ, ಪವಿತ್ರಾ ಮಾತಾಜಿ ವಂದಿಸಿದರು.

By suddi9

Leave a Reply

Your email address will not be published. Required fields are marked *