ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಬೆಂಗಳೂರು ಬಿಲ್ಲವ ಎಸೋಸಿಯೇಶನ್ ವತಿಯಿಂದ ಬಿ.ಸಿ.ರೋಡ್ನ ಗಾಣದಪಡ್ಪು ಸಭಾಂಗಣದಲ್ಲಿ ‘ವಧು-ವರಾನ್ವೇಷಣಾ ಸಮಾವೇಶ’ವು ಏ.19ಆದಿತ್ಯವಾರ ಬೆಳಿಗ್ಗೆ ನಡೆಯಲಿದೆ.
ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಸಮಾವೇಶ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಕಾಂಗ್ರೆಸ್ ಮುಖಂಡ ಕೆ.ಹರಿಕೃಷ್ಣ ಬಂಟ್ವಾಳ ಮತ್ತಿತರ ಗಣ್ಯರು ಭಾಗವಹಿಸುವರು .