ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಅಮ್ಟೂರು ಗ್ರಾಮದ ಕರಿಂಗಾನ ಎಂಬಲ್ಲಿ ಶುಕ್ರವಾರ ಸಂಜೆ ಮರವೊಂದು ಮುರಿದು ಬಿದ್ದ ಪರಿಣಾಮ ಮನೆಗೆ ಹಾನಿಯಾಗಿ ಮನೆಯೊಳಗಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
25btl-hani
ಗಾಯಾಳುವನ್ನು ಕರಿಂಗಾನ ನಿವಾಸಿ ತಿಮ್ಮಪ್ಪ ಪೂಜಾರಿ ಎಂಬವರ ಪತ್ನಿ ಕಮಲ (50) ಎಂದು ಗುರುತಿಸಲಾಗಿದ್ದು, ಇವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಎರಡು ದಿನಗಳಲ್ಲಿ ಸುರಿದ ಮಳೆಯಿಂದ ಮಣ್ಣು ಸಡಿಲಗೊಂಡು ಮನೆ ಸಮೀಪದಲ್ಲಿದ್ದ ಬೃಹತ್ ಗಾತ್ರದ ಮರವೊಂದು ಕುಸಿದು ಬಿದ್ದಿದೆ. ಇದೇ ವೇಳೆ ಮನೆಯಿಂದ ಹೊರಗೆ ಬರುತ್ತಿದ್ದ ಕಮಲ ಅವರು ಗಾಯಗೊಂಡು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಕರಣಿಕ ಎ.ಪಿ. ಭಟ್ ಮತ್ತಿತರರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಒಟ್ಟು ರೂ 25ಸಾವಿರ ಮೊತ್ತದ ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *