ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅರಳ ಗ್ರಾಮದ ಮುಲ್ಲಾರಪಟ್ನ ಎಂಬಲ್ಲಿನ ಫಲ್ಗುಳಿ ಹೊಳೆಯಿಂದ ವ್ಯಾಪಕವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಕಂದಾಯ ನಿರೀಕ್ಷಕ ಸಾಧು ನೇತೃತ್ವದ ಅಧಿಕಾರಿಗಳು ಮಂಗಳವಾರ ದಿಢೀರ್ ಭೇಟಿ ನೀಡಿ ಬರಿಗೈಲಿ ಮರಳಿದ ಘಟನೆ ನಡೆದಿದೆ. ಇವರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸುತ್ತಿದ್ದಂತೆಯೇ ಮರಳುಗಾರರು ಮತ್ತು ಲಾರಿ ಕಣ್ಮರೆಯಾಗಿದ್ದು, ನದಿಯಲ್ಲಿ ನೀರಿನ ಮಟ್ಟವೂ ಏರಿಕೆಯಾಗಿತ್ತು ಎಂದು ತಿಳಿದು ಬಂದಿದೆ.
ಗ್ರಾಮಕರಣಿಕ ಕುಮಾರ್, ಗ್ರಾಮಸಹಾಯಕ ಸಂದೀಪ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.