ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಒಟ್ಟು 57 ಗ್ರಾಮ ಪಂಚಾಯಿತಿಗಳಿಗೆ ಇದೇ 29ರಂದು ನಡೆಯಲಿರುವ ಚುನಾವಣೆಗೆ ಒಟ್ಟು 2,567 ನಾಮಪತ್ರ ಸಲ್ಲಿಕೆಯಾಗಿದೆ. ಈ ಪೈಕಿ ಪುರುಷರು -1,459 ಹಾಗೂ ಮಹಿಳೆಯರು-1,108 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನಲ್ಲಿ ಒಟ್ಟು 59 ಗ್ರಾಮ ಪಂಚಾಯಿತಿಗಳ ಪೈಕಿ 57 ಪಂಚಾಯಿತಿಗೆ ಚುನಾವಣೆ ನಡೆಯಲಿದ್ದು, ಉಳಿದಂತೆ ವಿಟ್ಲ ಗ್ರಾಮ ಪಂಚಾಯಿತಿ ಮೇಲ್ದರ್ಜೆಗೆ ಹಾಗೂ ಪುದು ಗ್ರಾಮ ಪಂಚಾಯಿತಿ ಅವಧಿ ಪೂರ್ಣಗೊಳ್ಳದ ಕಾರಣ ಚುನಾವಣೆ ನಡೆಯುತ್ತಿಲ್ಲ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.