ಬಂಟ್ವಾಳ : ಬಂಟ್ವಾಳ ತಾಲೂಕು ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜುಗಳ ಮುಖ್ಯಸ್ಥರಿಗೆ ಕೀಟಜನ್ಯ ರೋಗಗಳ ಬಗೆಗಿನ ಮಾಹಿತಿ ಕಾರ್ಯಾಗಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜೂ.18ರಂದು ಜರಗಿತು.
2006pkt3
ಬಂಟ್ವಾಳ ತಾಲೂಕು ಆರೋಗ್ಯಾ„ಕಾರಿ ಡಾ|ಮಂಜುನಾಥ್ ಅವರು ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಕೇಂದ್ರದ ವೈದ್ಯಾ„ಕಾರಿ ಡಾ|ದುರ್ಗಾಪ್ರಸಾದ್ ಎಂ.ಆರ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ವಿವಿಧ ಕೀಟಜನ್ಯ ರೋಗಗಳ ಬಗ್ಗೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಸಹಿತ ಮಾಹಿತಿ ನೀಡಿದರು. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ 13 ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜು , ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು, ಎನ್ನೆಸ್ಸೆಸ್ ಕಾರ್ಯಕ್ರಮಾ„ಕಾರಿಗಳು ಕುಕ್ಕಿಪಾಡಿ ಗ್ರಾ.ಪಂ.ನ ಎಲ್ಲಾ ಚುನಾಯಿತ ಸದಸ್ಯರು, ಆರೋಗ್ಯ ಕೇಂದ್ರದ ಕಾರ್ಯಕರ್ತೆಯರು, ಸಿಬಂದಿ ವರ್ಗ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *