ನವದೆಹಲಿ : ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನವದೆಹಲಿಯಲ್ಲಿ ಭಾನುವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅತಿಥಿಯಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ ಭಾಗವಹಿಸಿದರು.

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನವದೆಹಲಿಯಲ್ಲಿ ಭಾನುವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅತಿಥಿಯಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ ಭಾಗವಹಿಸಿದರು.
ಸ್ವಾಮಿ ರಾಮದೇವ್ ಹಾಗೂ ಬೆಂಗಳೂರಿನ ವಿವೇಕಾನಂದ ಯೋಗ ಕೇಂದ್ರದ ಡಾ. ಎಚ್.ಆರ್. ನಾಗೇಂದ್ರ ಉಪಸ್ಥಿತರಿದ್ದರು.
ಬಳಿಕ ವಿಜ್ಞಾನ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಆರೋಗ್ಯ ಭಾಗ್ಯ ರಕ್ಷಣೆಯಲ್ಲಿ ಯೋಗದ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.


