ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ರಾಷ್ಟ್ರೀಯ ಹೆದ್ದಾರಿ ಬಳಿ ಪಂಚಾಯಿತಿ ಪರವಾನಿಗೆ ಉಲ್ಲಂಘಿಸಿ ಸೈಯದ್ ಬಾವ ಎಂಬವರು ನಿರ್ಮಿಸುತ್ತಿರುವ ವಸತಿ ಸಮುಚ್ಛಯ ಬಳಿ ಮಂಗಳವಾರ ಮಧ್ಯಾಹ್ನ ಗುಡ್ಡದ ಮಣ್ಣು ಕುಸಿದು ಬಿದ್ದು ಮೂವರು ಕಾರ್ಮಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಸಂಸದ ನಳಿನ್ ಕುಮಾರ್ ಕಟೀಲು, ಜಿ.ಪಂ.ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಉಪಾಧ್ಯಕ್ಷ ಸತೀಶ ಕುಂಪಲ, ತಹಶೀಲ್ದಾರ್ ಪುರಂದರ ಹೆಗ್ಡೆ, ಕಂದಾಯ ನಿರೀಕ್ಷಕ ನಾರಾಯಣ ಪೂಜಾರಿ, ಗ್ರಾಮಕರಣಿಕ ಪ್ರದೀಪ ಕೆ., ಗ್ರಾ.ಪಂ.ಅಧ್ಯಕ್ಷೆ ಲಕ್ಷ್ಮಿ, ಉಪಾಧ್ಯಕ್ಷ ಮಹಮ್ಮದ್ ಶರೀಫ್, ಪಿಡೊ ಸವಿತಾ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಮತ್ತಿತರರು ಬುಧವಾರ ಸಂಜೆ ಭೇಟಿ ನೀಡಿದರು.
