ನಾವೂರು ಗ್ರಾಮದಲ್ಲಿ ಸಿಡಿಲು ಬಡಿದು ಮೃತ ಪಟ್ಟ ಪ್ರದೀಪ್ ಕುಮಾರ್ ಅವರ ಕುಟುಂಬಕ್ಕೆ ಸರಕಾರದ ವತಿಯಿಂದ ರೂ 4 ಲಕ್ಷ ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವರಾದ ಬಿ.ರಮಾನಾಥ ರೈ ವಿತರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಅಕ್ರಮ – ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಪದ್ಮಶೇಖರ್ ಜೈನ್, ಬೂಡ ಅಧ್ಯಕ್ಷ ಪಿಯೂಸ್ ರೊಡ್ರಿಗಸ್, ಅಜಿತ್ ಹಾಗೂ ಕಂದಾಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಾಕೃತಿಕ ವಿಕೋಪದಿಂದ ವಾಸ್ತವ್ಯದ ಮನೆಗೆ ಹಾನಿ ಸಂಭವಿಸಿದ ಎಂಟು ಕುಟುಂಬಗಳಿಗೆ ಪರಿಹಾರ ನಿಧಿಯನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವರಾದ ಬಿ.ರಮಾನಾಥ ರೈ ವಿತರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಅಕ್ರಮ – ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಪದ್ಮಶೇಖರ್ ಜೈನ್, ಬೂಡ ಅಧ್ಯಕ್ಷ ಪಿಯೂಸ್ ರೊಡ್ರಿಗಸ್, ಅಜಿತ್ ಹಾಗೂ ಕಂದಾಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
