ಧರ್ಮಸ್ಥಳ : ಧರ್ಮಸ್ಥಳದಲ್ಲಿ ಅಗಸ್ಟ್13ರಂದು ಧರ್ಮಸ್ಥಳದ ಅಮೃತವರ್ಷಿಣಿಯಲ್ಲಿ ನಡೆದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿ ಉಜಿರೆಯ ಇಂದ್ರಪ್ರಸ್ಥ ಕ್ರೀಡಾಂಗಣದಲ್ಲಿ ಅಗಸ್ಟ್ 18 ರಂದು ಜರುಗಿದ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಶ್ರೀ. ಧ.ಮಂ.ಆಂಗ್ಲಮಾಧ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳಾದ ಆದಿತ್ಯ ಕುಮಾರ್, ಗುರುಚರಣ್,ದಿವಿತ್, ಸುಮುಖ, ಮತ್ತು ಶ್ರೇಯಸ್ ವಿದ್ಯಾರ್ಥಿನಿಯರಾದ ರಕ್ಷಿತಾ ಬೇಕಲ್,ಸೌಮ್ಯಾ, ಸಮೀಕ್ಷಾ ಮತ್ತು ಅನನ್ಯಾ ಜೈನ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಶಾಲಾ ಸಹಶಿಕ್ಷಕಿ ಶ್ರೀಮತಿ ದಿವ್ಯಶ್ರೀ ಮತ್ತು ಶಾಲಾ ದೈಹಿಕ ಶಿಕ್ಷಕ ಶ್ರೀ.ಸುಭಾಶ್ಚಂದ್ರ ತರಬೇತಿ ನೀಡಿದ್ದರು ಎಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳಾ ಎಂ.ವಿ. ತಿಳಿಸಿದ್ದಾರೆ.