ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಬ್ರಹ್ಮರಕೂಟ್ಲು ಸಮೀಪದ ಉಮನಬೆಟ್ಟು ನಿವಾಸಿ, ಕೆಪಿಸಿಸಿ ಮಾಜಿ ಸದಸ್ಯ ಬದ್ರುದ್ದೀನ್(58) ಇವರು ಹೃದಯಾಘಾತದಿಂದ ಮಂಗಳವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ. ಕಳೆದ ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದ ಇವರು ಬೆಂಗಳೂರಿನ ಬಿಬಿಎಂಪಿ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಸಲೀಂ ಅಹ್ಮದ್ ಮನೆಯಲ್ಲಿ ಮಂಗಳವಾರ ಮಧ್ಯಾಹ್ನ ಟಿವಿ ಮೂಲಕ ಫಲಿತಾಂಶ ವಿವರ ನೋಡುತ್ತಿದ್ದ ವೇಳೆ ಆಘಾತÀಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯ ಬಸವೇಶ್ವರ ನಗರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದರು. ಕಾಂಗ್ರೆಸ್‍ನಲ್ಲಿ ಸಕ್ರಿಯರಾಗಿದ್ದ ಇವರು ಅಲ್‍ವಫಾ ಮತ್ತಿತರ ಸಂಘಟನೆ ಮೂಲಕ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿದ್ದರು.
ಮೃತರ ಅಂತ್ಯಕ್ರಿಯ ಬುಧವಾರ ಇಲ್ಲಿನ ಬ್ರಹ್ಮರಕೂಟ್ಲುವಿನಲ್ಲಿ ನಡೆಯಲಿದ್ದು, ಮಂಗಳವಾರ ರಾತ್ರಿಯೇ ಮೃತದೇಹ ತರಲಾಗುವುದು ಎಂದು ಅವರ ಕುಟುಂಬಿಕರು ತಿಳಿಸಿದ್ದಾರೆ