ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಶ್ರೀ ರಾಜರಾಜೇಶ್ವರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಬಂಟ್ವಾಳ ಜನಜಾಗೃತಿ ವೇದಿಕೆ ತುಂಬೆ ವಲಯ ಮತ್ತು ಬಂಟ್ವಾಳ ರೋಟರಿ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಆ.27ರಂದು ಗುರವಾರ ಪೊಳಲಿ ರಾಜರಾಜೇಶ್ವರಿ ಶಾಲೆಯಲ್ಲಿ ನಡೆಯಿತು.
ಇದರ ಉದ್ಘಾಟನೆಯನ್ನು ಬಂಟ್ವಾಳ ರೋಟರಿ ಕ್ಲಬಿನ ವೆಂಕಟೇಶ್ ಬಾಲಿಗ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸರಕಾರಿ ಪ್ರೌಡ ಶಾಲಾ ಶಿಕ್ಷಕಿ ಉಮಾವತಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳ ಮಲೇರಿಯಾ ಪರಿವೀಕ್ಷಕರಾದ ಜಯರಾಮ್ ಪೂಜಾರಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿಗಳಾದ ರೇಖಾ ,ಅರುಣ, ಜರ್ನಾದನ್ ಪೂಜಾರಿ ಉಪಸ್ಥಿತರಿದ್ದರು, ಕಾರ್ಯಕ್ರಮವನ್ನು ತುಂಬೆ ವಲಯದ ಮೇಲ್ವಿಚಾರಕರು ವಿನಾಯಕ ಕಾರ್ಯಕ್ರಮ ನಿರೂಪಿಸಿದರು, ಶಾಲಾ ಅಧ್ಯಾಪಕಿ ಕುಮಾರಿ ರಂಜಿತಾ ಕಾರ್ಯಕ್ರಮ ನಿರೂಪಿಸಿದರು. ಒಂಬತ್ತು ಮತ್ತು ಹತ್ತನೇ ತರಗತಿಯ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಸಾಕ್ಷಾ ಚಿತ್ರದ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಯಿತು.








