ಆಧುನಿಕ ಸಮಾಜ ನಿರಂತರವಾಗಿ ಬದಲಾಗುತ್ತಿದೆ. ಬದಲಾಗುವ ಸಮಾಜಕ್ಕೆ ಅನುಗುಣವಾಗಿ ಜೀವನಕ್ರಮ ಕೂಡ ಬದಲಾಗುತ್ತಾ ಇದೆ. ನಗರ ಜೀವನಕ್ಕೆ ಹೊಂದಿಕೊಂಡಂತಹ ಆಧುನಿಕ ಸಮಾಜ, ಸಮಾಜದ ಆರೋಗ್ಯವನ್ನು ಕೆಡಿಸುವಂತಹ ಮಾದಕ ವ್ಯಸನಗಳತ್ತ ಯುವಕರು ಮಾರು ಹೋಗುತ್ತಿದ್ದಾರೆ. ಮಾರುಕಟ್ಟೆಗಳಲ್ಲಿ ಸಿಗುವಂತಹ ಮಾದಕ ವಸ್ತುಗಳಿಗೆ ವಿದ್ಯಾಥರ್ಿಗಳು ಕೂಡಾ ಬಲಿಯಾಗುತ್ತಿದ್ದಾರೆ. ಇದರ ಬಗ್ಗೆ ಎಚ್ಚರ ಮೂಡಿಸುವ ಕೆಲಸ ಅಗತ್ಯವಾಗಿ ನಡೆಯಬೇಕೇಂದು ಜಿಲ್ಲಾ ಮಲೇರಿಯಾ ಪರಿವೀಕ್ಷಣಾ ಅಧಿಕಾರಿ ಶ್ರೀ ಜಯರಾಮ ಪೂಜಾರಿ ಅಭಿಪ್ರಾಯಪಟ್ಟರು.

ಅವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪ.ಪೂ.ಕಾಲೇಜಿನಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ (ರಿ) ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ, ರೋಟರಿ ಕ್ಲಬ್ (ರಿ) ಬಂಟ್ವಾಳ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಎಸ್.ವಿ.ಎಸ್.ಪ.ಪೂ.ಕಾಲೇಜು ಇದರ ಸಹಭಾಗಿತ್ವದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೋಟರಿ ಕ್ಲಬ್ನ ಸದಸ್ಯ ಶ್ರೀ ವಸಂತ ಪ್ರಭು ಕಾರ್ಯಕ್ರಮ ಉದ್ಘಾಟಿಸಿದರು. ಪ.ಪೂ.ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ (ರಿ) ಬಂಟ್ವಾಳ ಇದರ ಮೇಲ್ವಿಚಾರಕರಾದ ಚಂದ್ರಶೇಖರ್ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀಮತಿ ಭಾರತಿ ಪಿ. ಸ್ವಾಗತಿಸಿದರು. ಉಪನ್ಯಾಸಕ ರಿಯಾಜ್ ಎಸ್. ವಂದಿಸಿದರು. ಉಪನ್ಯಾಸಕ ಪ್ರದೀಪ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
