ಬಂಟ್ವಾಳ: ಕರ್ನಾಟಕ ರಾಜ್ಯ ಬಿಜೆಪಿ ವತಿಯಿಂದ ನಡೆಯುತ್ತಿರುವ ರೈತ ಚೈತನ್ಯ ಯಾತ್ರೆಯ ಅಂಗವಾಗಿ ಬಿ.ಸಿ.ರೋಡಿನ ಗಾಣದ ಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ದ ಪಕ್ಕದ ವಿಶಾಲ ಮೈದಾನದಲ್ಲಿ ಸೆ.11 ರಂದು ನಡೆಯಿರುವ ಬೃಹತ್ ರೈತರ ಸಮಾವೇಶ ಕ್ಕೆ ಪೂರ್ವಭಾವಿಯಾಗಿ ಸಂಸದ ನಳಿನ್ ಕುಮಾರ್ ಕಟೀಲು ರವರು ಸೋಮವಾರ ಬೆಳಿಗ್ಗೆ ಚಪ್ಪರ ಮುಹೂರ್ತ ನೆರವೇರಿಸಿದರು.
1 (3)

2 (3)
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ರೈತ ಚೈತನ್ಯ ಯಾತ್ರೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಸರ್ಕಾರವನ್ನು ಎಚ್ಚರಿಸುವ ಕಾರ್ಯ ಪಕ್ಷದ ವತಿಯಿಂದ ನಡೆಯುತ್ತಿದೆ ಎಂದರು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಜಿ.ಆನಂದ, ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಭಟ್, ರುಕ್ಮಯ ಪೂಜಾರಿ, ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ವಿಧಾನಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಪಕ್ಷದ ಪ್ರಮುಖರಾದ ದೇವದಾಸ ಶೆಟ್ಟಿ, ರಾಮದಾಸ ಬಂಟ್ವಾಳ, ದಿನೇಶ್ ಭಂಡಾರಿ, ದಿನೇಶ್ ಅಮ್ಟೂರು ಮೊದಲಾದವರಿದ್ದರು.

By suddi9

Leave a Reply

Your email address will not be published. Required fields are marked *